ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
Cross references
ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
ಇಗೋ, ನನ್ನ ಕಣ್ಣು ಎಲ್ಲಾ ನೋಡಿತು; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿತು.
ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?
ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.
ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ
ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.