Home Bibles ಯೋಬ 7:16 · ಕನ್ನಡ ಬೈಬಲ್
ಯೋಬ 7:16 · ಕನ್ನಡ ಬೈಬಲ್

ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.

Cross references

ಆದಿಕಾಂಡ 27:46

ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.

1 ಅರಸುಗಳು 19:4

ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್‌ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.

ಯೋಬ 3:20

ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?

ಯೋಬ 6:9

ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.

ಯೋಬ 9:21

ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.

ಯೋಬ 10:1

ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.

ಯೋಬ 10:20

ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.

ಯೋಬ 14:6

ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.

ಕೀರ್ತನೆಗಳು 39:6

ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.

ಕೀರ್ತನೆಗಳು 39:10

ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.

ಕೀರ್ತನೆಗಳು 39:13

ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.

ಕೀರ್ತನೆಗಳು 62:9

ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.

ಕೀರ್ತನೆಗಳು 78:33

ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.

ಕೀರ್ತನೆಗಳು 144:4

ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.

ಸಭಾಪ್ರಸಂಗಿ 2:17

ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.

ಸಭಾಪ್ರಸಂಗಿ 6:11

ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.

ಯೋನ 4:3

ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.

ಯೋನ 4:8

ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.

Interlinear

Choose Theme