Home Bibles ಯೋಬ 7:4 · ಕನ್ನಡ ಬೈಬಲ್
ಯೋಬ 7:4 · ಕನ್ನಡ ಬೈಬಲ್

ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ

Cross references

ದ್ವಿತೀಯೋಪದೇಶಕಾಂಡ 28:67

ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.

ಯೋಬ 7:13

ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ

ಯೋಬ 17:12

ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ.

ಯೋಬ 30:17

ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.

ಕೀರ್ತನೆಗಳು 6:6

ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.

ಕೀರ್ತನೆಗಳು 77:4

ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.

ಕೀರ್ತನೆಗಳು 109:23

ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;

ಕೀರ್ತನೆಗಳು 130:6

ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.

ಯೆಶಾಯ 54:11

ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.

Interlinear

Choose Theme