ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
Cross references
ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.