ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು.ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
Cross references
ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--
ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.