Home Bibles ☰ Books ಯೋಬ 8:3 · ಕನ್ನಡ ಬೈಬಲ್
ಯೋಬ 8:3 · ಕನ್ನಡ ಬೈಬಲ್

ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?

Cross references

ಆದಿಕಾಂಡ 18:25

ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.

ದ್ವಿತೀಯೋಪದೇಶಕಾಂಡ 32:4

ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.

2 ದಿನವೃತ್ತಾಂತ 19:7

ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.

ಯೋಬ 4:17

ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?

ಯೋಬ 9:2

ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?

ಯೋಬ 10:3

ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?

ಯೋಬ 19:6

ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.

ಯೋಬ 19:7

ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.

ಯೋಬ 21:15

ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.

ಯೋಬ 21:20

ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.

ಯೋಬ 34:5

ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.

ಯೋಬ 34:10

ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.

ಯೋಬ 34:12

ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.

ಯೋಬ 34:17

ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?

ಯೋಬ 35:13

ನಿಶ್ಚಯವಾಗಿ ವ್ಯರ್ಥವಾದ ದ್ದನ್ನು ದೇವರು ಕೇಳುವದಿಲ್ಲ. ಇಲ್ಲವೇ ಸರ್ವಶಕ್ತನು ಅದನ್ನು ಲಕ್ಷಿಸುವದಿಲ್ಲ.

ಯೋಬ 37:23

ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.

ಯೋಬ 40:2

ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.

ಯೋಬ 40:8

ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?

Interlinear

Choose Theme