ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
Cross references
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.