Home Bibles ಯೋಬ 9:16 · ಕನ್ನಡ ಬೈಬಲ್
ಯೋಬ 9:16 · ಕನ್ನಡ ಬೈಬಲ್

ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.

Cross references

ನಿರ್ಗಮಕಾಂಡ 6:9

ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.

ನ್ಯಾಯಾಧಿಪತಿಗಳು 6:13

ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.

ಯೋಬ 29:24

ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.

ಕೀರ್ತನೆಗಳು 18:6

ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.

ಕೀರ್ತನೆಗಳು 66:18

ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.

ಕೀರ್ತನೆಗಳು 116:1

ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.

ಕೀರ್ತನೆಗಳು 126:1

ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.

ಲೂಕ 24:41

ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.

ಅಪೋಸ್ತಲರ ಕೃತ್ಯಗಳು 12:14

ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.

Interlinear

Choose Theme