Home Bibles ಯೋಬ 9:19 · ಕನ್ನಡ ಬೈಬಲ್
ಯೋಬ 9:19 · ಕನ್ನಡ ಬೈಬಲ್

ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?

Cross references

ಯೋಬ 9:4

ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?

ಯೋಬ 9:32

ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.

ಯೋಬ 31:35

ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.

ಯೋಬ 33:5

ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.

ಯೋಬ 36:17

ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.

ಯೋಬ 40:9

ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?

ಕೀರ್ತನೆಗಳು 62:11

ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.

ಕೀರ್ತನೆಗಳು 62:12

ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.

ಮತ್ತಾಯ 6:13

ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

1 ಕೊರಿಂಥದವರಿಗೆ 1:25

ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.

1 ಕೊರಿಂಥದವರಿಗೆ 10:22

ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?

Interlinear

Choose Theme