Home Bibles ಯೋಬ 9:3 · ಕನ್ನಡ ಬೈಬಲ್
ಯೋಬ 9:3 · ಕನ್ನಡ ಬೈಬಲ್

ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.

Cross references

ಯೋಬ 9:20

ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.

ಯೋಬ 9:32

ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.

ಯೋಬ 10:2

ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.

ಯೋಬ 23:3

ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು.

ಯೋಬ 31:35

ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.

ಯೋಬ 33:13

ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.

ಯೋಬ 34:14

ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;

ಯೋಬ 34:23

ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ.

ಯೋಬ 40:2

ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.

ಕೀರ್ತನೆಗಳು 19:12

ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.

ಕೀರ್ತನೆಗಳು 40:12

ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.

ಯೆಶಾಯ 57:15

ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

ರೋಮಾಪುರದವರಿಗೆ 9:20

ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?

1 ಯೋಹಾನ 1:8

ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

1 ಯೋಹಾನ 3:20

ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.

Interlinear

Choose Theme