ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
Cross references
ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ
ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?
ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?
ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.