Home Bibles ಯೋವೇಲ 1:12 · ಕನ್ನಡ ಬೈಬಲ್
ಯೋವೇಲ 1:12 · ಕನ್ನಡ ಬೈಬಲ್

ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.

Cross references

ಅಂಕೆಗಳ ಪುಸ್ತಕ 13:23

ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.

ಕೀರ್ತನೆಗಳು 4:7

ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.

ಕೀರ್ತನೆಗಳು 92:12

ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.

ಪರಮಗೀತ 2:3

ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.

ಪರಮಗೀತ 4:13

ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.

ಪರಮಗೀತ 7:7

ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.

ಯೆಶಾಯ 9:3

ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.

ಯೆಶಾಯ 16:10

ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.

ಯೆಶಾಯ 24:11

ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.

ಯೆರೆಮಿಯ 48:3

ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಯೆರೆಮಿಯ 48:33

ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.

ಹೊಶೇಯ 9:1

ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.

ಯೋವೇಲ 1:10

ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.

ಯೋವೇಲ 1:16

ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?

ಹಬಕ್ಕೂಕ 3:17

ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ

ಹಗ್ಗಾಯ 2:19

ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.

ಮಲಾಕಿ 3:11

ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Interlinear

Choose Theme