Home Bibles ಯೋವೇಲ 1:4 · ಕನ್ನಡ ಬೈಬಲ್
ಯೋವೇಲ 1:4 · ಕನ್ನಡ ಬೈಬಲ್

ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.

Cross references

ನಿರ್ಗಮಕಾಂಡ 10:4

ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.

ನಿರ್ಗಮಕಾಂಡ 10:12

ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.

ನಿರ್ಗಮಕಾಂಡ 10:14

ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.

ನಿರ್ಗಮಕಾಂಡ 10:15

ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.

ದ್ವಿತೀಯೋಪದೇಶಕಾಂಡ 28:38

ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.

ದ್ವಿತೀಯೋಪದೇಶಕಾಂಡ 28:42

ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.

1 ಅರಸುಗಳು 8:37

ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ

2 ದಿನವೃತ್ತಾಂತ 6:28

ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ

2 ದಿನವೃತ್ತಾಂತ 7:13

ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ

ಕೀರ್ತನೆಗಳು 78:46

ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು

ಕೀರ್ತನೆಗಳು 105:34

ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,

ಯೆಶಾಯ 33:4

ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.

ಯೆರೆಮಿಯ 51:14

ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.

ಯೆರೆಮಿಯ 51:27

ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್‌ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.

ಯೋವೇಲ 2:25

ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.

ಆಮೋಸ 4:9

ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಆಮೋಸ 7:1

ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.

ನಹೂಮ 3:15

ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.

ಮಲಾಕಿ 3:11

ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಪ್ರಕಟನೆ 9:3

ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.

Interlinear

Choose Theme