Home Bibles ಯೋವೇಲ 2:21 · ಕನ್ನಡ ಬೈಬಲ್
ಯೋವೇಲ 2:21 · ಕನ್ನಡ ಬೈಬಲ್

ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.

Cross references

ಆದಿಕಾಂಡ 15:1

ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.

ದ್ವಿತೀಯೋಪದೇಶಕಾಂಡ 4:32

ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?

1 ಸಮುವೇಲ 12:16

ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.

1 ಸಮುವೇಲ 12:24

ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.

ಕೀರ್ತನೆಗಳು 65:12

ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.

ಕೀರ್ತನೆಗಳು 71:19

ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!

ಕೀರ್ತನೆಗಳು 96:11

ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.

ಕೀರ್ತನೆಗಳು 98:8

ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.

ಕೀರ್ತನೆಗಳು 126:1

ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.

ಕೀರ್ತನೆಗಳು 126:3

ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.

ಯೆಶಾಯ 35:1

ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.

ಯೆಶಾಯ 41:10

ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಯೆಶಾಯ 44:23

ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.

ಯೆಶಾಯ 54:4

ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.

ಯೆಶಾಯ 55:12

ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್‌ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.

ಯೆರೆಮಿಯ 30:9

ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.

ಯೆರೆಮಿಯ 33:3

ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.

ಹೊಶೇಯ 2:21

ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು.

ಯೋವೇಲ 2:20

ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.

ಸೆಫನ್ಯ 3:16

ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.

ಜೆಕರ್ಯ 8:15

ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.

Interlinear

Choose Theme