Home Bibles ☰ Books ಯೋವೇಲ 3:15 · ಕನ್ನಡ ಬೈಬಲ್
ಯೋವೇಲ 3:15 · ಕನ್ನಡ ಬೈಬಲ್

ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.

Cross references

ಯೆಶಾಯ 13:10

ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.

ಯೋವೇಲ 2:10

ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.

ಯೋವೇಲ 2:31

ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್‌ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.

ಮತ್ತಾಯ 24:29

ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.

ಲೂಕ 21:25

ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.

ಪ್ರಕಟನೆ 6:12

ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.

Interlinear

Choose Theme