ಯೋವೇಲ 3:20 · ಕನ್ನಡ ಬೈಬಲ್
ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
Cross references
ಯೆಶಾಯ 33:20
ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
ಯೆಹೆಜ್ಕೇಲ 37:25
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಆಮೋಸ 9:15
ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.