ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
Cross references
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.
ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.