Cross references
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;