ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
Cross references
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.