Home Bibles ಯೋಹಾನ 1:3 · ಕನ್ನಡ ಬೈಬಲ್
ಯೋಹಾನ 1:3 · ಕನ್ನಡ ಬೈಬಲ್

ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.

Cross references

ಆದಿಕಾಂಡ 1:1

ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.

ಆದಿಕಾಂಡ 1:26

ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಕೀರ್ತನೆಗಳು 33:6

ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.

ಕೀರ್ತನೆಗಳು 102:25

ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.

ಯೆಶಾಯ 45:12

ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.

ಯೆಶಾಯ 45:18

ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.

ಯೋಹಾನ 1:10

ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.

ಯೋಹಾನ 5:17

ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.

1 ಕೊರಿಂಥದವರಿಗೆ 8:6

ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.

ಎಫೆಸದವರಿಗೆ 3:9

ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ

ಕೊಲೊಸ್ಸೆಯವರಿಗೆ 1:16

ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.

ಹೆಬ್ರಿಯರಿಗೆ 1:2

ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.

ಹೆಬ್ರಿಯರಿಗೆ 1:10

ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.

ಹೆಬ್ರಿಯರಿಗೆ 3:3

ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.

ಪ್ರಕಟನೆ 4:11

ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.

Interlinear

Choose Theme