Cross references
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು.
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.