Home Bibles ಯೋಹಾನ 1:42 · ಕನ್ನಡ ಬೈಬಲ್
ಯೋಹಾನ 1:42 · ಕನ್ನಡ ಬೈಬಲ್

42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).

Cross references

2 ಅರಸುಗಳು 5:4

ಆಗ ಒಬ್ಬನು ಹೋಗಿ ಇಸ್ರಾಯೇಲ್‌ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.

ಮತ್ತಾಯ 10:2

ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,

ಮತ್ತಾಯ 16:17

ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.

ಮಾರ್ಕ 3:16

ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.

ಲೂಕ 5:8

ಸೀಮೋನ್‌ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.

ಲೂಕ 6:14

ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

ಯೋಹಾನ 1:47

ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.

ಯೋಹಾನ 2:24

ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.

ಯೋಹಾನ 4:16

ಯೇಸು ಆಕೆಗೆ--ಹೋಗಿ ನಿನ್ನ ಗಂಡನನ್ನು ಕರಕೊಂಡು ಇಲ್ಲಿಗೆ ಬಾ ಅಂದನು.

ಯೋಹಾನ 6:70

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್‌ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.

ಯೋಹಾನ 13:18

ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.

ಯೋಹಾನ 21:2

ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.

ಯೋಹಾನ 21:15

ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ

1 ಕೊರಿಂಥದವರಿಗೆ 1:12

ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

1 ಕೊರಿಂಥದವರಿಗೆ 3:22

ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.

1 ಕೊರಿಂಥದವರಿಗೆ 9:5

ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?

1 ಕೊರಿಂಥದವರಿಗೆ 15:5

ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.

ಗಲಾತ್ಯದವರಿಗೆ 2:9

ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.

Interlinear

Choose Theme