Home Bibles ಯೋಹಾನ 10:12 · ಕನ್ನಡ ಬೈಬಲ್
ಯೋಹಾನ 10:12 · ಕನ್ನಡ ಬೈಬಲ್

ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.

Cross references

ಯೆಶಾಯ 56:10

ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.

ಯೆಹೆಜ್ಕೇಲ 34:2

ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?

ಜೆಕರ್ಯ 11:16

ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.

ಮತ್ತಾಯ 7:15

ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.

ಮತ್ತಾಯ 10:16

ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.

ಯೋಹಾನ 10:3

ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.

ಅಪೋಸ್ತಲರ ಕೃತ್ಯಗಳು 20:29

ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.

1 ತಿಮೋಥೆಯ 3:3

ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.

1 ತಿಮೋಥೆಯ 3:8

ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ

2 ತಿಮೋಥೆಯ 4:10

ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;

ತೀತ 1:7

ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ

1 ಪೇತ್ರ 5:2

ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.

2 ಪೇತ್ರ 2:3

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.

Interlinear

Choose Theme