Home Bibles ಯೋಹಾನ 10:33 · ಕನ್ನಡ ಬೈಬಲ್
ಯೋಹಾನ 10:33 · ಕನ್ನಡ ಬೈಬಲ್

ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.

Cross references

ಲೇವ್ಯಕಾಂಡ 24:14

ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.

ಲೇವ್ಯಕಾಂಡ 24:16

ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.

1 ಅರಸುಗಳು 21:10

ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.

ಕೀರ್ತನೆಗಳು 82:6

ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.

ಯೋಹಾನ 5:18

ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.

ಯೋಹಾನ 10:30

ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.

ರೋಮಾಪುರದವರಿಗೆ 13:1

ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.

ಫಿಲಿಪ್ಪಿಯವರಿಗೆ 2:6

ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ

Interlinear

Choose Theme