Home Bibles ಯೋಹಾನ 10:41 · ಕನ್ನಡ ಬೈಬಲ್
ಯೋಹಾನ 10:41 · ಕನ್ನಡ ಬೈಬಲ್

ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.

Cross references

ಮತ್ತಾಯ 3:11

ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.

ಮತ್ತಾಯ 4:23

ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ಮತ್ತಾಯ 14:2

ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.

ಮಾರ್ಕ 1:37

ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ

ಲೂಕ 5:1

ಇದಾದ ಮೇಲೆ ಆತನು ಗೆನೇಜರೆತ್‌ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.

ಲೂಕ 7:26

ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.

ಲೂಕ 12:1

ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.

ಯೋಹಾನ 1:27

ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.

ಯೋಹಾನ 1:29

ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

ಯೋಹಾನ 1:33

ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.

ಯೋಹಾನ 2:11

ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.

ಯೋಹಾನ 3:26

ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.

Interlinear

Choose Theme