ಯೋಹಾನ 11:18 · ಕನ್ನಡ ಬೈಬಲ್
ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
Cross references
ಲೂಕ 24:13
ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
ಯೋಹಾನ 6:19
ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
ಯೋಹಾನ 11:1
ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
ಪ್ರಕಟನೆ 14:20
ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
ಪ್ರಕಟನೆ 21:16
ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.