Home Bibles ಯೋಹಾನ 12:21 · ಕನ್ನಡ ಬೈಬಲ್
ಯೋಹಾನ 12:21 · ಕನ್ನಡ ಬೈಬಲ್

ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.

Cross references

ಮತ್ತಾಯ 2:2

ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.

ಮತ್ತಾಯ 8:9

ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ

ಮತ್ತಾಯ 11:21

ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

ಮತ್ತಾಯ 12:19

ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.

ಮತ್ತಾಯ 15:22

ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.

ಲೂಕ 19:2

ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.

ಯೋಹಾನ 1:36

ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.

ಯೋಹಾನ 1:43

ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.

ಯೋಹಾನ 6:5

ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.

ಯೋಹಾನ 6:40

ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.

ಯೋಹಾನ 14:8

ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.

ರೋಮಾಪುರದವರಿಗೆ 15:8

ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

Interlinear

Choose Theme