ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
Cross references
ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;