ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
Cross references
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.