Home Bibles ಯೋಹಾನ 12:44 · ಕನ್ನಡ ಬೈಬಲ್
ಯೋಹಾನ 12:44 · ಕನ್ನಡ ಬೈಬಲ್

ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.

Cross references

ಸಾಮೇತಿಗಳು 1:20

ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.

ಸಾಮೇತಿಗಳು 8:1

ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?

ಯೆಶಾಯ 55:1

ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.

ಮತ್ತಾಯ 10:40

ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.

ಮಾರ್ಕ 9:37

ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.

ಯೋಹಾನ 5:24

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಯೋಹಾನ 7:28

ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.

ಯೋಹಾನ 11:43

ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.

ಯೋಹಾನ 13:20

ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.

1 ಪೇತ್ರ 1:21

ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.

Interlinear

Choose Theme