Home Bibles ಯೋಹಾನ 13:23 · ಕನ್ನಡ ಬೈಬಲ್
ಯೋಹಾನ 13:23 · ಕನ್ನಡ ಬೈಬಲ್

ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.

Cross references

2 ಸಮುವೇಲ 12:3

ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.

1 ಅರಸುಗಳು 4:5

ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.

ಯೋಹಾನ 1:18

ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.

ಯೋಹಾನ 11:3

ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.

ಯೋಹಾನ 11:5

ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.

ಯೋಹಾನ 11:36

ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.

ಯೋಹಾನ 13:25

ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.

ಯೋಹಾನ 19:26

ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.

ಯೋಹಾನ 20:2

ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.

ಯೋಹಾನ 21:7

ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).

ಯೋಹಾನ 21:20

ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ

ಯೋಹಾನ 21:24

ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.

ಪ್ರಕಟನೆ 1:16

ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.

Interlinear

Choose Theme