Home Bibles ಯೋಹಾನ 13:36 · ಕನ್ನಡ ಬೈಬಲ್
ಯೋಹಾನ 13:36 · ಕನ್ನಡ ಬೈಬಲ್

ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.

Cross references

ಯೋಹಾನ 13:33

ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.

ಯೋಹಾನ 14:2

ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.

ಯೋಹಾನ 14:4

ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.

ಯೋಹಾನ 16:17

ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ

ಯೋಹಾನ 21:18

ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ

ಯೋಹಾನ 21:21

ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು.

2 ಪೇತ್ರ 1:14

ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.

Interlinear

Choose Theme