Cross references
ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.