Home Bibles ಯೋಹಾನ 17:18 · ಕನ್ನಡ ಬೈಬಲ್
ಯೋಹಾನ 17:18 · ಕನ್ನಡ ಬೈಬಲ್

ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ.

Cross references

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಮತ್ತಾಯ 10:5

ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.

ಮತ್ತಾಯ 23:34

ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

ಯೋಹಾನ 4:38

ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.

ಯೋಹಾನ 17:3

ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.

ಯೋಹಾನ 17:8

ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.

ಯೋಹಾನ 17:21

ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.

ಯೋಹಾನ 17:23

ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.

ಯೋಹಾನ 17:25

ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.

ಯೋಹಾನ 20:21

ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.

2 ಕೊರಿಂಥದವರಿಗೆ 5:20

ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಎಫೆಸದವರಿಗೆ 3:7

ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

Interlinear

Choose Theme