ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
Cross references
ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು.