Home Bibles ಯೋಹಾನ 18:27 · ಕನ್ನಡ ಬೈಬಲ್
ಯೋಹಾನ 18:27 · ಕನ್ನಡ ಬೈಬಲ್

ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.

Cross references

ಮತ್ತಾಯ 26:34

ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.

ಮತ್ತಾಯ 26:74

ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

ಮಾರ್ಕ 14:30

ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.

ಮಾರ್ಕ 14:68

ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.

ಮಾರ್ಕ 14:71

ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.

ಲೂಕ 22:34

ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.

ಲೂಕ 22:57

ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.

ಲೂಕ 22:60

ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.

ಯೋಹಾನ 13:38

ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.

Interlinear

Choose Theme