Home Bibles ☰ Books ಯೋಹಾನ 18:29 · ಕನ್ನಡ ಬೈಬಲ್
ಯೋಹಾನ 18:29 · ಕನ್ನಡ ಬೈಬಲ್

ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ

Cross references

ಮತ್ತಾಯ 27:11

ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.

ಮತ್ತಾಯ 27:23

ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

ಮಾರ್ಕ 15:2

ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.

ಲೂಕ 23:2

ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

ಅಪೋಸ್ತಲರ ಕೃತ್ಯಗಳು 23:28

ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.

ಅಪೋಸ್ತಲರ ಕೃತ್ಯಗಳು 25:16

ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರ

Interlinear

Choose Theme