Home Bibles ಯೋಹಾನ 18:31 · ಕನ್ನಡ ಬೈಬಲ್
ಯೋಹಾನ 18:31 · ಕನ್ನಡ ಬೈಬಲ್

ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.

Cross references

ಆದಿಕಾಂಡ 49:10

ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.

ಯೆಹೆಜ್ಕೇಲ 21:26

ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.

ಹೊಶೇಯ 3:4

ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್‌ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.

ಯೋಹಾನ 19:6

ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.

ಯೋಹಾನ 19:15

ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.

ಅಪೋಸ್ತಲರ ಕೃತ್ಯಗಳು 25:18

ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.

Interlinear

Choose Theme