Home Bibles ಯೋಹಾನ 18:35 · ಕನ್ನಡ ಬೈಬಲ್
ಯೋಹಾನ 18:35 · ಕನ್ನಡ ಬೈಬಲ್

ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.

Cross references

ಎಜ್ರಾ 4:12

ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.

ನೆಹೆಮ್ಯ 4:2

ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.

ಯೋಹಾನ 18:28

ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

ಯೋಹಾನ 19:6

ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.

ಯೋಹಾನ 19:11

ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

ಅಪೋಸ್ತಲರ ಕೃತ್ಯಗಳು 3:13

ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

ಅಪೋಸ್ತಲರ ಕೃತ್ಯಗಳು 18:14

ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.

ಅಪೋಸ್ತಲರ ಕೃತ್ಯಗಳು 21:38

ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.

ಅಪೋಸ್ತಲರ ಕೃತ್ಯಗಳು 22:22

ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

ಅಪೋಸ್ತಲರ ಕೃತ್ಯಗಳು 23:29

ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.

ಅಪೋಸ್ತಲರ ಕೃತ್ಯಗಳು 25:19

ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.

ರೋಮಾಪುರದವರಿಗೆ 3:1

ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?

Interlinear

Choose Theme