ಯೋಹಾನ 18:39 · ಕನ್ನಡ ಬೈಬಲ್
ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
Cross references
ಮತ್ತಾಯ 27:15
ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
ಮತ್ತಾಯ 27:20
ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
ಮಾರ್ಕ 15:6
ಆ ಹಬ್ಬದಲ್ಲಿ ಜನರು ಬೇಡಿ ಕೊಂಡ ಒಬ್ಬ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.
ಲೂಕ 23:16
ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
ಲೂಕ 23:17
ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).