ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
Cross references
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.