Home Bibles ಯೋಹಾನ 20:15 · ಕನ್ನಡ ಬೈಬಲ್
ಯೋಹಾನ 20:15 · ಕನ್ನಡ ಬೈಬಲ್

ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ

Cross references

1 ಸಮುವೇಲ 1:16

ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.

ಪರಮಗೀತ 3:2

ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು.

ಪರಮಗೀತ 6:1

ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?

ಮತ್ತಾಯ 12:34

ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

ಮತ್ತಾಯ 28:5

ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.

ಮಾರ್ಕ 16:6

ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;

ಲೂಕ 24:5

ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?

ಯೋಹಾನ 1:38

ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.

ಯೋಹಾನ 18:4

ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು

ಯೋಹಾನ 18:7

ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.

ಯೋಹಾನ 20:13

ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.

Interlinear

Choose Theme