ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
Cross references
ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ.
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‌ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.