ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
Cross references
ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.