Home Bibles ಯೋಹಾನ 4:39 · ಕನ್ನಡ ಬೈಬಲ್
ಯೋಹಾನ 4:39 · ಕನ್ನಡ ಬೈಬಲ್

ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.

Cross references

ಯೋಹಾನ 1:37

ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.

ಯೋಹಾನ 4:5

ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್‌ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.

ಯೋಹಾನ 4:29

ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.

ಯೋಹಾನ 4:42

ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.

ಯೋಹಾನ 10:41

ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.

ಯೋಹಾನ 11:45

ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.

Interlinear

Choose Theme