ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
Cross references
ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು
ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.
ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ