ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
Cross references
ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.