Home Bibles ಯೋಹಾನ 7:16 · ಕನ್ನಡ ಬೈಬಲ್
ಯೋಹಾನ 7:16 · ಕನ್ನಡ ಬೈಬಲ್

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.

Cross references

ಯೋಹಾನ 3:11

ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.

ಯೋಹಾನ 3:31

ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.

ಯೋಹಾನ 5:23

ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.

ಯೋಹಾನ 5:30

ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.

ಯೋಹಾನ 6:38

ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.

ಯೋಹಾನ 6:44

ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.

ಯೋಹಾನ 8:28

ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.

ಯೋಹಾನ 12:49

ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.

ಯೋಹಾನ 14:10

ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.

ಯೋಹಾನ 14:24

ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.

ಯೋಹಾನ 17:8

ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.

ಯೋಹಾನ 17:14

ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.

ಪ್ರಕಟನೆ 1:1

ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ

Interlinear

Choose Theme