Home Bibles ಯೋಹಾನ 8:5 · ಕನ್ನಡ ಬೈಬಲ್
ಯೋಹಾನ 8:5 · ಕನ್ನಡ ಬೈಬಲ್

ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.

Cross references

ಲೇವ್ಯಕಾಂಡ 20:10

ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.

ದ್ವಿತೀಯೋಪದೇಶಕಾಂಡ 22:21

ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;

ಯೆಹೆಜ್ಕೇಲ 16:38

ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.

ಯೆಹೆಜ್ಕೇಲ 23:47

ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.

ಮತ್ತಾಯ 5:17

ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.

ಮತ್ತಾಯ 19:6

ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.

ಮತ್ತಾಯ 22:16

ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು

Interlinear

Choose Theme