Home Bibles ಯೋಹಾನ 9:16 · ಕನ್ನಡ ಬೈಬಲ್
ಯೋಹಾನ 9:16 · ಕನ್ನಡ ಬೈಬಲ್

ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ

Cross references

ಮತ್ತಾಯ 12:2

ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.

ಲೂಕ 13:31

ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.

ಯೋಹಾನ 3:2

ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.

ಯೋಹಾನ 5:36

ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಯೋಹಾನ 6:52

ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.

ಯೋಹಾನ 7:12

ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.

ಯೋಹಾನ 7:43

ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;

ಯೋಹಾನ 9:24

ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.

ಯೋಹಾನ 9:30

ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?

ಯೋಹಾನ 10:19

ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.

ಯೋಹಾನ 14:11

ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.

ಯೋಹಾನ 15:24

ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.

ಅಪೋಸ್ತಲರ ಕೃತ್ಯಗಳು 14:4

ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.

Interlinear

Choose Theme